ಡಿ 14 (DaijiworldNews/SK): ಕೃತಕ ಬುದ್ಧಿಮತ್ತೆಯೊಂದಿಗೆ ಅಪಾಯ ತಂದಿರುವ ಡೀಪ್ಫೇಕ್ ತಂತ್ರಜ್ಞಾನ ತಡೆಯಲು ಸರ್ಕಾರ ಈಗಾಗಲೇ ಹಲವು ಕಠಿಣ ಕ್ರಮ ಕೈಗೊಂಡರು, ಇದೀಗ ಮತ್ತೆ ರಶ್ಮಿಕಾ ಅವರ ಮತ್ತೊಂದು ಡೀಪ್ಫೇಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕೆಲವು ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ಸಿನಿಮಾ ನಟರ ಮಾರ್ಪ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಬರುತ್ತಿದ್ದಂತೆ ಅಮಿತಾಬ್ ಬಚ್ಚನ್ ಸೇರಿದಂತೆ ಸಾಕಷ್ಟು ಜನರು ಡೀಪ್ಫೇಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಇಂತಹ ತಂತ್ರಜ್ಞಾನವನ್ನು ಕೆಟ್ಟ ರೀತಿಯಲ್ಲಿ ಬಳಸುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು, ಇನ್ನು ಮುಂದೆ ಇಂತಹ ಆಪ್, ಸಾಫ್ಟ್ವೇರ್ ಗಳು ದುರುದ್ದೇಶಕ್ಕೆ ಬಳಕೆ ಆಗದಂತೆ ನೋಡಿಕೊಳ್ಳಬೇಕು ಮನವಿ ಮಾಡಿದ್ದರು
ಇಷ್ಟು ಮಾತ್ರವಲ್ಲದೇ ಪ್ರಧಾನಿ ನರೇಂದ್ರ ಮೋದಿ ಸಹ ಡೀಪ್ಫೇಕ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದರು. ಪ್ರಸ್ತುತ ನಮ್ಮ ದೇಶ ತಂತ್ರಜ್ಞಾನ ಯುಗದತ್ತ ಸಾಗುತ್ತಿದೆ.
ಇದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಕೂಡ ಬಂದಿದೆ. ಇದರಲ್ಲಿ ಡೀಪ್ಫೇಕ್ ಕೂಡ ಒಂದು. ಹೊಸ ತಂತ್ರಜ್ಞಾನದಿಂದ ಹೆಚ್ಚುತ್ತಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾಧ್ಯಮಗಳ ಮೂಲಕ ತಿಳಿಸಿದ್ದರು.
ಆದರೂ ಕೂಡ ಕಿಡಿಗೇಡಿಗಳು ಅಟ್ಟಹಾಸ ಕಡಿಮೆ ಮಾಡದೆ, ಬಾಡಿಕಾನ್ ಡ್ರೆಸ್ನಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಯುವತಿಯೊಬ್ಬಳು ಕಾಣಿಸಿಕೊಂಡಿರುವ ವಿಡಿಯೋಗೆ ರಶ್ಮಿಕಾ ಮುಖ ಅಂಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಇದು ಮಂದಣ್ಣ ನ ಎಂದು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.