ಡಿ 28 (DaijiworldNews/PC): ವ್ಯೂಹಂ ಸಿನಿಮಾ ನಿರ್ದೇಶನ ಮಾಡಿದ್ದಕ್ಕೆ ತಮಗೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ. ನನ್ನ ತಲೆ ಕತ್ತರಿಸಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತಗೆದುಕೊಳ್ಳಬೇಕು ಎಂದು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಆಂಧ್ರ ಪೊಲೀಸರ ಮೊರೆ ಹೋಗಿದ್ದಾರೆ.
ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದರು.
ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೇ ಸಮಯದಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ.
ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.
ರಾಜಕೀಯವಾಗಿ ಏನೇ ಕಿತ್ತಾಟಗಳು ಇದ್ದರೂ, ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.
ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದು ಹೇಳಿದ್ದಾರೆ.