ಬೆಂಗಳೂರು, ಜ 8(DaijiworldNews/AA): ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಲೇ ಇದೆ. ಆದರೆ ರಶ್ಮಿಕಾ ಹಾಗೂ ವಿಜಯ್ ಇದುವರೆಗೆ ತಾವಿಬ್ಬರು ಪ್ರೀತಿಸುತ್ತಿರುವುದಾಗಿ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಇದೀಗ ಅವರಿಬ್ಬರೂ 2024 ನೇ ಫೆಬ್ರವರಿ 2ನೇ ವಾರದಲ್ಲಿ ನಿಶ್ಚಿತಾರ್ಥವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಅವರಿಬ್ಬರು ಜೊತೆಯಾಗಿ ಓಡಾಡಿದ ಫೋಟೋಗಳು, ಅವರಿಬ್ಬರ ವಿದೇಶಿ ಪ್ರವಾಸ, ಹಲವಾರು ಪಾರ್ಟಿಗಳಲ್ಲಿ, ಪಶಸ್ತಿ ಸಮಾರಂಭಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು ಎಲ್ಲರಲ್ಲೂ ಅನುಮಾನ ಸೃಷ್ಟಿಸಿದೆ. ಈ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ಮಾಹಿತಿಯನ್ನು ಹಂಚಿಕೊಳ್ಳದೇ ನಾವಿಬ್ಬರೂ ಕೇವಲ ಸ್ನೇಹಿತರಷ್ಟೇ ಎಂದು ಅವರು ಹೇಳುತ್ತಾ ಬರುತ್ತಿದ್ದಾರೆ. ಆದರೆ ಕೆಲ ದಿನಗಳಿಂದ ವಿಜಯ್ ಹಾಗೂ ರಶ್ಮಿಕಾ ಫೆಬ್ರವರಿ ನಿಶ್ಚಿತಾರ್ಥವಾಗುತ್ತಿದ್ದಾರೆ. ಈ ಬಗ್ಗೆ ಫೆಬ್ರವರಿ ಎರಡನೇ ವಾರದಲ್ಲಿ ಅನೌನ್ಸ್ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಶ್ಮಿಕಾ ಮಂದಣ್ಣ ಕನ್ನಡದ 'ಕಿರಿಕ್ ಪಾರ್ಟಿ' ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದವರು. ಈ ಸಿನಿಮಾದ ಬಳಿಕ ತೆಲುಗಿನ 'ಗೀತಾ ಗೋವಿಂದ' ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡರು. ಈ ಸಿನಿಮಾ ಮೂಲಕ ರಶ್ಮಿಕಾ ಹಾಗೂ ವಿಜಯ್ ಜೋಡಿ ಸೂಪರ್ ಹಿಟ್ ಆಗಿತ್ತು. ನಂತರ ರಶ್ಮಿಕಾ ಹಾಗೂ ವಿಜಯ್ 'ಡಿಯರ್ ಕಾಮ್ರೇಡ್' ಸಿನಿಮಾದಲ್ಲಿ ಮತ್ತೆ ಜೋಡಿಯಾಗಿ ತೆರೆ ಮೇಲೆ ಕಾಣಿಸಿಕೊಂಡರು. ಈ ಸಿನಿಮಾದ ಬಳಿಕ ಈ ಜೋಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.
2019 ರ ಆರಂಭದಲ್ಲಿ ರಶ್ಮಿಕಾ ಹಾಗೂ ವಿಜಯ್ ಡೇಟಿಂಗ್ ಮಾಡುತ್ತಿದ್ದಾರೆ, ಪ್ರೀತಿಸುತ್ತಿದ್ದಾರೆ ಎಂಬ ವದಂತಿಗಳು ಹರಿದಾಡಲು ಪ್ರಾರಂಭವಾಗುತ್ತದೆ. ಇದೀಗ ನಿಶ್ಚಿತಾರ್ಥವಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಸುದ್ದಿ ಸತ್ಯವೋ ಸುಳ್ಳೋ ಎಂದು ಕಾದು ನೋಡಬೇಕಿದೆ.