ನವದೆಹಲಿ ಜ, 21(DaijiworldNews/SK): ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ, ಡೀಪ್ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಈಗ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ನಟಿ ರಶ್ಮಿಕಾ ಮಂದಣ್ಣ ಆರೋಪಿಗಳನ್ನು ಪತ್ತೆಹಚ್ಚಿದ ದೆಹಲಿ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಆಂಧ್ರ ಪ್ರದೇಶದ ಗುಂಟೂರು ಮೂಲದ ನವೀನ್ ಈಮಾನಿ (24) ಬಂಧಿತ ಆರೋಪಿಯಾಗಿದ್ದು, ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅನ್ನು ನಿರ್ವಹಣೆ ಮಾಡುತ್ತಿದ್ದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ ರಶ್ಮಿಕಾ ಮಂದಣ್ಣ ಅವರು, ಡೀಪ್ಫೇಕ್ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬಹಳಷ್ಟು ಜನರು ನನಗೆ ಬೆಂಬಲ ನೀಡಿದ್ದೀರಿ. ಇದರ ಜೊತೆಗೆ ಪ್ರಕರಣ ಭೇದಿಸಿದ ಪೊಲೀಸರಿಗೂ ನಾನು ಕೃತಜ್ಞಳಾಗಿದ್ದೇನೆ" ಎಂದು ಬರೆದುಕೊಂಡಿದ್ದಾರೆ.
ಇನ್ನು ಇದರ ಜೊತೆಗೆ, ಹುಡುಗರೇ ಮತ್ತು ಹುಡುಗಿಯರೇ ನಿಮ್ಮ ಚಿತ್ರವನ್ನು ನಿಮ್ಮ ಒಪ್ಪಿಗೆಯಿಲ್ಲದೆ ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ. ಅದು ನಿಜವಾಗಿಯು ತಪ್ಪು. ಯಾವಾಗಲು ನಿಮ್ಮನ್ನು ಸಪೋರ್ಟ್ ಮಾಡುವ ಜನರ ಜೊತೆಗೆ ನೀವಿದ್ದಿರಿ ಎಂದು ನಾನು ಭಾವಿಸುತ್ತೇನೆ" ಇಂತಹ ಘಟನೆಗಳಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದ ಯುವ ಜನರಿಗೆ ಸಂದೇಶ ಸಾರಿದರು.