ಬೆಂಗಳೂರು, ಫೆ 12(DaijiworldNews/SK): ಬಹುಭಾಷಾ ನಟಿ ಕನ್ನಡದ ಗಿಲ್ಲಿ ಸಿನಿಮಾದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ರಾಕುಲ್ ಪ್ರೀತಿ ಸಿಂಗ್ ಇದೇ ಫೆಬ್ರವರಿ 21ರಂದು ಗೋವಾದಲ್ಲಿ ಹೊಸ ಜೀವನಕ್ಕೆ ಕಾಲಿಡಲು ಸಚ್ಚಾಗಿದ್ದಾರೆ.
ನಟಿ ರಾಕುಲ್ ಮೊನ್ನೆಯಷ್ಟೇ ತಮ್ಮ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು, ಅದೇ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ಮೂಲಕ ಮದುವೆ ವಿಚಾರವನ್ನು ರಿವೀಲ್ ಮಾಡಿದ್ದಾರೆ.
ರಾಕುಲ್ ಪ್ರೀತಿ ಸಿಂಗ್ ತಮ್ಮ ಜನ್ಮದಿನದಂದು ಬಾಯ್ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ "ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ.ಹ್ಯಾಪಿ ಬರ್ತ್ಡೇ ಮೈ ಲವ್" ಎಂದು ಇನ್ಸ್ಟಾಗ್ರಾಮ್ನಲ್ಲಿ ಶೀರ್ಷಿಕೆ ಬರೆದು ಪೋಟೋ ಹಂಚಿಕೊಂಡಿದ್ದರು.