ಬೆಂಗಳೂರು, ಏ 04(DaijiworldNews/AA): ಶುಕ್ರವಾರ (ಏ.5) ದಂದು ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಹುಟ್ಟುಹಬ್ಬ. ಈ ಹಿನ್ನೆಲೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ನಟಿ ಅಬುಧಾಬಿಗೆ ತೆರಳಿದ್ದಾರೆ.
ಈ ಬಾರಿ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ 28ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಈ ಬಾರಿಯ ಹುಟ್ಟುಹಬ್ಬಕ್ಕೆ ಹಲವು ಸರ್ ಪ್ರೈಸ್ ಗಳಿವೆ. ಇದೆಲ್ಲದರ ಮಧ್ಯೆ ರಶ್ಮಿಕಾ ಅವರು ಅಬುಧಾಬಿಗೆ ಹೋಗಿದ್ದು, ಅಲ್ಲಿಯೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ರಶ್ಮಿಕಾ ಅವರು ತಮ್ಮ ಬರ್ತ್ ಡೇ ದಿನವೇ ಅವರ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಲಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಅವರ ಹೊಸ ಸಿನಿಮಾದ ಮಾಹಿತಿ ದೊರೆಯಲಿದೆ ಎಂದು ಹೇಳಲಾಗುತ್ತಿದೆ.