ಹೈದರಾಬಾದ್, ಏ 07 (DaijiworldNews/AA): ನಟ ವಿಜಯ್ ದೇವರಕೊಂಡ ಹಾಗೂ ಬಾಲಿವುಡ್ ಬೆಡಗಿ ಮೃಣಾಲ್ ಠಾಕೂರ್ ಅಭಿನಯದ 'ದಿ ಫ್ಯಾಮಿಲಿ ಸ್ಟಾರ್' ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ಬಳಿಕ ಸಿನಿಮಾವನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲು ಪ್ರಾರಂಭಿಸಿದ್ದು, ಅಂತವರ ವಿರುದ್ಧ 'ದಿ ಫ್ಯಾಮಿಲಿ ಸ್ಟಾರ್' ಚಿತ್ರತಂಡ ಸೈಬರ್ ಪೊಲೀಸರಿಗೆ ದೂರು ನೀಡಿದೆ.
ನಟ ವಿಜಯ್ ದೇವರಕೊಂಡ ಅವರ ಅಭಿಮಾನಿಗಳು ಹೇಗಿದ್ದಾರೋ ಹಾಗೇಯೇ ಅವರನ್ನು ದ್ವೇಷಿಸುವ ಒಂದು ವರ್ಗವೂ ಇದೆ. ಹೀಗಾಗಿ ಅವರ 'ದಿ ಫ್ಯಾಮಿಲಿ ಸ್ಟಾರ್' ಸಿನಿಮಾವನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಹಿನ್ನಲೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದವರ ವಿರುದ್ಧ ಚಿತ್ರತಂಡ ಕಾನೂನಿನಡಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ.
ಈ ಬಗ್ಗೆ ವಿಜಯ್ ದೇವರಕೊಂಡ ಅವರ ಮ್ಯಾನೇಜರ್ ಹಾಗೂ ಅಭಿಮಾನಿ ಸಂಘದ ಅಧ್ಯಕ್ಷರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ದೂರಿನೊಂದಿಗೆ ಟ್ರೋಲ್ ಮಾಡಿದ ಸೋಶಿಯಲ್ ಮೀಡಿಯಾ ಖಾತೆಗಳ ಸ್ಕ್ರೀನ್ ಶಾಟ್ಗಳಂತಹ ಅನೇಕ ಸಾಕ್ಷಿಗಳನ್ನು ಪೊಲೀಸರಿಗೆ ನೀಡಿದ್ದಾರೆ. ಇನ್ನು ಪೊಲೀಸರು ಈ ಘಟನೆಯ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಕಾದುನೋಡಬೇಕಿದೆ.