ಹೈದರಾಬಾದ್, ಏ 08 (DaijiworldNews/AA): ಬಾಲಿವುಡ್ ನ ಸ್ಟಾರ್ ನಟ ಅಕ್ಷಯ್ ಕುಮಾರ್ ಅವರು ಮೊಟ್ಟ ಮೊದಲ ಬಾರಿಗೆ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಸೌತ್ ಸಿನಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.
ಹೌದು, ನಟ ಅಕ್ಷಯ್ ಕುಮಾರ್ ಅವರು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿರುವ ತೆಲುಗಿನ 'ಕಣ್ಣಪ್ಪ' ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ವಿಷ್ಣು ಮಂಚು ಅವರು ಈ ಚಿತ್ರದ ನಾಯಕ ನಟನಾಗಿದ್ದು, ಪುರಾಣದ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಇಂಡಸ್ಟ್ರಿ ಟ್ರ್ಯಾಕರ್ ರಮೇಶ್ ಬಾಲಾ ಅವರು, 'ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ವಿಷ್ಣು ಮಂಚು ಅವರ ಮಹತ್ವಾಕಾಂಕ್ಷಿ ಸಿನಿಮಾವಾದ ‘ಕಣ್ಣಪ್ಪ’ ಚಿತ್ರದ ಪಾತ್ರವರ್ಗಕ್ಕೆ ಬಾಲಿವುಡ್ನ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಸೇರ್ಪಡೆ ಆಗಿದ್ದಾರೆ. ಪ್ರಭಾಸ್, ಪ್ರಭುದೇವ, ಮೋಹನ್ಲಾಲ್, ಶರತ್ಕುಮಾರ್ ಮುಂತಾದವರ ಬಳಿಕ ಅಕ್ಷಯ್ ಕುಮಾರ್ ಅವರ ಗ್ರ್ಯಾಂಡ್ ಎಂಟ್ರಿ ಆಗಿದೆ’ ಎಂದು ಬರೆದುಕೊಂಡಿದ್ದಾರೆ.
'ಕಣ್ಣಪ್ಪ' ಸಿನಿಮಾದ ಪಾತ್ರವರ್ಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದ್ದು, ಅನೇಕ ಸ್ಟಾರ್ ನಟರ ಬಳಿಕ ಅಕ್ಷಯ್ ಕುಮಾರ್ ಇದೀಗ ಚಿತ್ರತಂಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಎಲ್ಲಾ ಸ್ಟಾರ್ ನಟರೊಂದಿಗೆ ಕನ್ನಡದ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಅವರು ಕೂಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.