ಚೆನ್ನೈ, ಏ. 12 (DaijiworldNews/AA): ಟಾಲಿವುಡ್ ನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ನಟ ರಾಮ್ ಚರಣ್ ಅವರು ಚಿತ್ರರಂಗದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡುತ್ತಿದೆ. ಏಪ್ರಿಲ್ 13ರಂದು ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
ಇನ್ನು ನೆಚ್ಚಿನ ನಟನಿಗೆ ಡಾಕ್ಟರೇಟ್ ದೊರೆತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ರಾಮ್ ಚರಣ್ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.