ಬೆಂಗಳೂರು, ಏ. 15(DaijiworldNews/AK):'ಕಾಂತಾರ’ ಬೆಡಗಿ ಸಪ್ತಮಿ ಗೌಡ ಸದ್ಯ ಕನ್ನಡದ ಜೊತೆಗೆ ಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳಲ್ಲಿ ಭಾರೀ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಬಾಲಿವುಡ್ ನಂತರ ತೆಲುಗಿನ ಕಡೆ ಮುಖ ಮಾಡಿರುವ ನಟಿ ಇದೀಗ ನಿತಿನ್ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಸಪ್ತಮಿ ಮಾಹಿತಿ ಹಂಚಿಕೊಂಡಿದ್ದಾರೆ. ನಿತಿನ್ ಸಿನಿಮಾದಲ್ಲಿ ನಾನು ನಟಿಸುತ್ತಿದ್ದೇನೆ. ಈಗಾಗಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಿದೆ. ನಾನು ಹೋಗಿ ಸೆಟ್ ಸೇರಿಕೊಳ್ಳಬೇಕಿದೆ ಎಂದಿದ್ದಾರೆ.
ಅವರು ಈ ಸಿನಿಮಾಗಾಗಿ ಕುದುರೆ ಸವಾರಿ ಕಲಿಯುತಿದ್ದಾರೆ. ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. ನಾನು ಕುದುರೆ ಸವಾರಿ ಕಲಿಯುತ್ತಿದ್ದೇನೆ. ಸಂಪೂರ್ಣವಾಗಿ ಕಲಿತಿಲ್ಲ. ಇನ್ನೂ ಕಲಿಯುತ್ತಿದ್ದೇನೆ ಎಂದಿದ್ದಾರೆ.ಇದೀಗ ನಿತಿನ್ ಜೊತೆಗಿನ ಸಿನಿಮಾಗಾಗಿ ಕುದುರೆ ಸವಾರಿ ಕಲಿಯಲು ಮುಂದಾಗಿದ್ದಾರೆ. ಅದಷ್ಟೇ ಅಲ್ಲ, ತಮ್ಮ ತೂಕವನ್ನು ಇಳಿಸಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ , ಶ್ರೀಲೀಲಾ , ರುಕ್ಮಿಣಿ ವಸಂತ್ ತೆಲುಗಿನಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಸಪ್ತಮಿ ಗೌಡ ಕೂಡ ಹೆಜ್ಜೆ ಇಡುತ್ತಿದ್ದು. ಕಾಂತಾರ ಬೆಡಗಿಗೆ ಜಯ ಸಿಗುತ್ತಾ ಅನ್ನುವುದು ನೋಡಬೇಕಿದೆ.