ಕೇರಳ, ಏ. 24(DaijiworldNews/AK): ಮಂಜುಮ್ಮೆಲ್ ಬಾಯ್ಸ್’ ಖ್ಯಾತಿಯ ದೀಪಕ್ ಪರಂಬೆಲ್ಜೊತೆ ‘ಬೀಸ್ಟ್’ನಟಿ ಅಪರ್ಣಾ ದಾಸ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇರಳದ ದೇವಸ್ಥಾನದಲ್ಲಿ ಈ ಜೋಡಿ ಸರಳವಾಗಿ ಮದುವೆ ಮಾಡಿಕೊಂಡಿದ್ದಾರೆ.
ಮದುವೆಯ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದು, , ನವಜೋಡಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ. ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ಈ ಮದುವೆ ನಡೆದಿದ್ದು, ದೀಪಕ್- ಅಪರ್ಣಾ ಬಾದಮಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಇಬ್ಬರೂ ಕುಟುಂಬದ ಸದಸ್ಯರು, ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.
ಕೆಲದಿನಗಳ ಹಿಂದೆ ಇಬ್ಬರ ಮದುವೆ ಬಗ್ಗೆ ಭಾರೀ ಸುದ್ದಿಯಾಗಿತ್ತು. ಆದರೆ ಇಬ್ಬರೂ ಮದುವೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಮದುವೆ ಫೋಟೋ ಶೇರ್ ಮಾಡಿ ಫ್ಯಾನ್ಸ್ಗೆ ಸಿಹಿಸುದ್ದಿ ನೀಡಿದ್ದಾರೆ. ಮಲಯಾಳಂನಲ್ಲಿ ಹಲವು ಸಿನಿಮಾಗಳಲ್ಲಿ ಅಪರ್ಣಾ ದಾಸ್ 2022ರಲ್ಲಿ ತೆರೆಕಂಡ ಬೀಸ್ಟ್ ಸಿನಿಮಾದಲ್ಲಿ ವಿಜಯ್ ಜೊತೆ ನಟಿಸಿದ್ದರು.