ಮುಂಬೈ, ಮೇ.4(DaijiworldNews/AA): ನಟ ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ನಟಿಸುತ್ತಿರುವ ಮೂರನೇ ಸಿನಿಮಾಗೆ ನಟಿ ಶ್ರೀದೇವಿ ಅವರ 2ನೇ ಪುತ್ರಿ ಖುಷಿ ಕಪೂರ್ ಅವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಜುನೈದ್ ಖಾನ್ ಹಾಗೂ ಖುಷಿ ಕಪೂರ್ ಅವರು ನಟಿಸುತ್ತಿರುವ ಈ ಸಿನಿಮಾವನ್ನು ಅದ್ವೈತ್ ಚಂದನ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾವು ತಮಿಳಿನ ಸೂಪರ್ ಹಿಟ್ ಸಿನಿಮಾ ‘ಲವ್ ಟುಡೇ’ ರಿಮೇಕ್ ಆಗಿರಲಿದೆ. ಶೀಘ್ರದಲ್ಲೇ ಇದರ ಶೂಟಿಂಗ್ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಜುನೈದ್ ಖಾನ್ ಅವರು ತಮ್ಮ ಮೊದಲ ಸಿನಿಮಾ ಬಿಡುಗಡೆಗೂ ಮುನ್ನವೇ 2ನೇ ಸಿನಿಮಾದ ಶೂಟಿಂಗ್ ಕೂಡ ಮುಗಿಸಿದ್ದಾರೆ. ಇದೀಗ ಈ ಎರಡು ಸಿನಿಮಾ ಬಿಡುಗಡೆಗೂ ಮುನ್ನವೇ ಹೆಸರಿಡದ ಮೂರನೇ ಸಿನಿಮಾವನ್ನು ಜುನೈದ್ ಖಾನ್ ಒಪ್ಪಿಕೊಂಡಿದ್ದಾರೆ.