ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು.ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭಹಾರೈಸಿದರು.
ಸಮಾರಂಭದಲ್ಲಿ ಶಿವಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ ರೈ ಕಳಸ, ಜಗನ್ ಪವಾರ್ ಬೇಕಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ತಮ್ಮ ಲಕ್ಷಣ, ಸಂತೋಷ್ ಶೆಟ್ಟಿ ಕುಂಬ್ಳೆ, ಶ್ರೀಕಾಂತ್ ಶೆಟ್ಟಿ, ಜ್ಯೋತಿಷ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ಉಪ್ಪಳ, ಪುಷ್ಪರಾಜ್ ರೈ, ರಾಘವೇಂದ್ರ ಹೊಳ್ಳ, ಮಲ್ಲಿಕಾಪ್ರಸಾದ್, ದಿನೇಶ್ ಶೆಟ್ಟಿ ಮಲಾರಬೀಡು, ರಾಮ್ ಪ್ರಸಾದ್,ಭಾಸ್ಕರ ಚಂದ್ರ ಶೆಟ್ಟಿ, ಕಿರಣ್ ಶೆಟ್ಟಿ, ಪ್ರೇಮ್ ಶೆಟ್ಟಿ ಸುರತ್ಕಲ್, ಉದಯ ಶೆಟ್ಟಿ ಇಡ್ಯಾ, ಅನಿಲ್ ರಾಜ್ ಮೊದಲಾದವರು ಉಪಸ್ಥತರಿದ್ದರು. ಲಕ್ಷ್ಮೀಶ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.
ಆರಾಟ ಸಿನಿಮಾ ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಂಡಿದೆ.
ಪಿ.ಎನ್.ಆರ್ ಬ್ಯಾನರ್ ನ ಅಡಿಯಲ್ಲಿ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್ ಕೆ, ನಿತೇಶ್ ಮಾಡಮ್ಮೆ ಹಾಗೂ ಸ್ನೇಹಿತರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಸಿನಿಮಾ ಕುರಿತು:
ಸಿನಿಮಾದ ಮೂಲಕಥೆ ರಾಘವೇಂದ್ರ ಹೊಳ್ಳ ಅವರದ್ದಾಗಿದ್ದು ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಜವಾಬ್ದಾರಿಯನ್ನು ಪುಷ್ಪರಾಜ್ ರೈ ಮಲಾರಬೀಡು ವಹಿಸಿದ್ದಾರೆ.ನಿರ್ದೇಶನ ತಂಡದಲ್ಲಿ ಜಯರಾಜ್ ಹೆಜಮಾಡಿ, ರೋಷನ್ ಆರ್ ಆಳ್ವ, ಹರ್ಷರಾಜ್ ಬಂಟ್ವಾಳ, ಅಭಿ ಬೋಳ್ಯಾರ್, ಸುಶಿನ್ ದುಡಿದಿದ್ದಾರೆ. ಛಾಯಾಗ್ರಹಣ ರವಿ ಸುವರ್ಣ, ಸಂಕಲನ ದಾಮು ಕನ್ಸೂರ್ , ಸಂಗೀತ ರಾಘವೇಂದ್ರ ಬೀಜಾಡಿ ಹಾಗೂ ಶಮೀರ್ ಮುಡಿಪು, ಸಾಹಿತ್ಯ ಹೆಚ್ ಎಸ್ ವೆಂಕಟೇಶ್ ಮೂರ್ತಿ ಹಾಗೂ ಯೋಗೀಶ್ , ಗಾಯಕರು ಶಮೀರ್ ಮುಡಿಪು ಹಾಗೂ ಶಾಲಿನಿ ಎಸ್ ಆರ್, ವಸ್ತ್ರ ವಿನ್ಯಾಸ ಶರತ್ ಪೂಜಾರಿ ಮಂಗಳೂರು, ಪ್ರಸಾಧನ ಚರಣ್ ರಾಜ್ ಪಚ್ಚಿನಡ್ಕ, ಕಲಾ ವಿನ್ಯಾಸ ಹರೀಶ್ ಆಚಾರ್ಯ, ಸ್ಥಿರ ಚಿತ್ರಣ ನವನೀತ್ ವಿಠ್ಠಲ್, ಪ್ರಚಾರಕಲೆ ಯಶ್ವಿನ್ ಕೆ ಶೆಟ್ಟಿಗಾರ್ ಹಾಗೂ ನಿರ್ಮಾಣ ಮೇಲ್ವಿಚಾರಣೆಯನ್ನು ಭಾಗ್ಯರಾಜ್ ನಾವೂರು ನಿರ್ವಹಿಸಿದ್ದಾರೆ.
ತಾರಾಗಣದಲ್ಲಿ ಸರಕಾರಿ ಹಿ.ಪ್ರಾ ಶಾಲೆ ಖ್ಯಾತಿಯ ದಡ್ಡ ಪ್ರವೀಣ ರಂಜನ್ ಕಾಸರಗೋಡು, ವೆನ್ಯ ರೈ, ಜ್ಯೋತಿಶ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ರಾಜ್ ಉಪ್ಪಳ, ಚೇತನ್ ರೈ ಮಾಣಿ, ರವಿ ರಾಮಕುಂಜ, ಸುರೇಶ್ ಮಂಜೇಶ್ವರ, ಪ್ರಭಾಕರ್ ಕಾಸರಗೋಡು , ತೇಜಸ್ವಿನಿ ಕಿಶೋರ್, ಸಂದೀಪ್ ಭಕ್ತ, ಆಶಾ ಮಾರ್ನಾಡ್, ನಯನ ಸಾಲ್ಯಾನ್, ದೀಕ್ಷಾ ಭಾಗ್ಯರಾಜ್ ನಾವೂರು, ವಿನೋದ್ ಶೆಟ್ಟಿ ಸಂಕೇತ್, ಉದಯ ಶೆಟ್ಟಿ ಇಡ್ಯಾ, ಉತ್ಸವ್ ವಾಮಂಜೂರ್, ತುಳಸೀಧರನ್, ಶಶಿ ಗುಜರನ್ ಪಡುಬಿದ್ರಿ ನಟಿಸಿದ್ದಾರೆ.