ಬೆಂಗಳೂರು, ಜು. 09(DaijiworldNews/AA): ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಈ ಮಳೆಯಿಂದ ಸಿನಿಮಾ ಶೂಟಿಂಗ್ಗೂ ಬ್ರೇಕ್ ಬಿದ್ದಿದ್ದು, ರಿಷಬ್ ಶೆಟ್ಟಿ ಅವರು ತಮ್ಮ ಕಾಂತಾರ ಪ್ರೀಕ್ವೆಲ್ ಶೂಟಿಂಗ್ಗೆ ಬ್ರೇಕ್ ಹಾಕಿದ್ದಾರೆ.
ಕಾಂತಾರ ಪ್ರೀಕ್ವೆಲ್ ಶೂಟಿಂಗ್ ಕುಂದಾಪುರದಲ್ಲಿ ಭರದಿಂದ ನಡೆಯುತ್ತಿತ್ತು. ಆದರೆ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಸುರಿಯಾಗುತ್ತಿದೆ. ಮಳೆ ಅಧಿಕವಾದ ಹಿನ್ನೆಲೆ ರಿಷಭ್ ಶೆಟ್ಟಿ ಅವರು ಶೂಟಿಂಗ್ ನಿಲ್ಲಿಸಿದ್ದಾರೆ. ಮಳೆ ಕಡಿಮೆ ಆದ ಬಳಿಕ ಮತ್ತೆ ಶೂಟಿಂಗ್ಗೆ ಚಾಲನೆ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಾಂತಾರ ಪ್ರೀಕ್ವೆಲ್ ಸಿನಿಮಾ ಶೂಟಿಂಗ್ ಗಾಗಿ ರಿಷಬ್ ಶೆಟ್ಟಿ ಅವರು ಬೆಂಗಳೂರಿಂದ ಕುಂದಾಪುರಕ್ಕೆ ಫ್ಯಾಮಿಲಿ ಸಮೇತ ಶಿಫ್ಟ್ ಆಗಿದ್ದರು. ಜೊತೆಗೆ ಅವರ ಮಕ್ಕಳಿಬ್ಬರನ್ನು ಕುಂದಾಪುರದಲ್ಲಿಯೇ ಶಾಲೆಗೆ ಸೇರಿಸಿದ್ದರು.
ಈಗಾಗಲೇ ಕಾಂತಾರ ಪ್ರೀಕ್ವೆಲ್ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ರಿಷಬ್ ಫಸ್ಟ್ ಲುಕ್ಗೆ ಅದ್ಭುತ ಪ್ರತಿಕ್ರಿಯೆ ದೊರೆತಿದೆ. ಅಂದಹಾಗೆ, ಈ ಸಿನಿಮಾವನ್ನು ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡುತ್ತಿದೆ.