ಬೆಂಗಳೂರು, ಜು. 20(DaijiworldNews/AA): ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಸಂಸ್ಥೆಯೊಂದು ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಮಾಡಿದೆ. ರಕ್ಷಿತ್ ಶೆಟ್ಟಿ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಇದೀಗ ಕೋರ್ಟ್ ಮೊರೆ ಹೋಗಿದ್ದಾರೆ.
ರಕ್ಷಿತ್ ಶೆಟ್ಟಿ ಅವರು ತಮ್ಮ ನಿರ್ಮಾಣದ ಸಿನಿಮಾದಲ್ಲಿ ಎರಡು ಹಾಡುಗಳನ್ನು ತಮ್ಮ ಒಪ್ಪಿಗೆ ಇಲ್ಲದೆ ಬಳಸಿಕೊಂಡಿದ್ದಾರೆ. ಪ್ರಕರಣವನ್ನು ನ್ಯಾಯಾಲಯದಲ್ಲಿಯೇ ಇತ್ಯರ್ಥಪಡಿಸಿಕೊಳ್ಳುವುದಾಗಿ ಹೇಳಿದ್ದ ನಟ ರಕ್ಷಿತ್ ಶೆಟ್ಟಿ ಅವರು ಇದೀಗ ಪ್ರಕರಣದಲ್ಲಿ ಬಂಧನವಾಗದಂತೆ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕಾಪಿ ರೈಟ್ಸ್ ಉಲ್ಲಂಘನೆ ಮಾಡಿರುವುದಾಗಿ ಆರೋಪಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ ಎರಡು ಹಳೆಯ ಹಾಡುಗಳ ಬಿಟ್ ಗಳನ್ನು ಬಳಸಿಕೊಳ್ಳಲಾಗಿತ್ತು. ಈ ಹಾಡುಗಳ ಹಕ್ಕುಗಳನ್ನು ಹೊಂದಿರುವ ಸಂಸ್ಥೆ ಇದೀಗ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿರುವುದಾಗಿ ಆರೋಪಿಸಿದೆ.