ಬೆಂಗಳೂರು, ಆ.02DaijiworldNews/AA): 'ಬ್ಯಾಚುಲರ್ ಪಾರ್ಟಿ' ಕಾಪಿರೈಟ್ ಉಲ್ಲಂಘನೆಗೆ ಸಂಬಂಧಿಸಿದಂತೆ ಕೊಟ್ಟಿರುವ ಕಂಪ್ಲೆಂಟ್ಗೆ ನಾನು ಕೂಡ ಕೋರ್ಟ್ನಲ್ಲಿ ಫೈಟ್ ಮಾಡ್ತೀನಿ ಎಂದು ನಟ ರಕ್ಷಿತ್ ಶೆಟ್ಟಿ ಹೇಳಿದ್ದಾರೆ.
ಕಾಪಿರೈಟ್ ಉಲ್ಲಂಘನೆ ಆರೋಪದ ವಿಚಾರವಾಗಿ ಇಂದು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ನಲ್ಲಿ ಫೈಟ್ ಮಾಡ್ತೀನಿ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ. ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ಜ್ಞಾನವೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ ಎಂದು ತಿಳಿಸಿದರು.
ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ ಎಂಆರ್ಟಿ ಮ್ಯೂಸಿಕ್ ಸಂಸ್ಥೆ ಅವರ ಬಳಿ ಮಾತನಾಡಿದಾಗ, ಹೆಚ್ಚಿನ ಮೊತ್ತ ಕೇಳಿದ್ದರು. ಅಷ್ಟು ದೊಡ್ಡ ಅಮೌಂಟ್ ಕೊಡೋಕೆ ನಮಗೆ ಸರಿ ಎನಿಸಲಿಲ್ಲ. ಆಮೇಲೆ ಅವರು ಹೇಳ್ತೀವಿ ಅಂತ ಆ ಮಾತುಕತೆ ಅಲ್ಲೇ ನಿಂತು ಹೋಯಿತು. ಈ ಸಿನಿಮಾದ ರಿಲೀಸ್ ನಂತರ ಅವರು ಕೇಸ್ ಹಾಕಿದ್ದಾರೆ ಎಂದಿದ್ದಾರೆ.
ಮೊದಲಿಗೆ ಇದು ಕಾಪಿರೈಟ್ ಉಲ್ಲಂಘನೆ ಅಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ? ಸಾಂದರ್ಭಿಕವಾಗಿ ಹಾಡು ಬಳಕೆಯಾಗಿದೆ ಅಷ್ಟೆ. ಕಾಪಿರೈಟ್ ಆಕ್ಟ್ ಏನು ಹೇಳುತ್ತೆ ಎಂಬುದನ್ನು ಕೋರ್ಟ್ನಲ್ಲಿ ನೋಡೋಣ. ನ್ಯಾಯಾಲಯ ತೀರ್ಮಾನ ಮಾಡಲಿ. ಈ ಬಗ್ಗೆ ನಮಗೂ ಅರ್ಥವಾಗಲಿ ಯಾವುದೂ ಬಳಸಬೇಕು ಯಾವುದು ಬಳಸಬಾರದು ಎಂದು. ನಮ್ಮ ಪ್ರಕಾರ, ಇದು ಸರಿ ಅಂತಾ ವಾದ ಮಾಡ್ತೀನಿ ಎಂದಿದ್ದಾರೆ