ತಿರುವನಂತಪುರಂ, ಆ.04(DaijiworldNews/AA): ಭೂಕುಸಿತದಿಂದ ವಯನಾಡು ಅಕ್ಷರಶಃ ನಲುಗಿ ಹೋಗಿದೆ. ನೂರಾರು ಮಂದಿ ಸಾವನ್ನಪ್ಪಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಸಂತ್ರಸ್ತರಿಗೆ ನೆರವಾಗಲು ಮುಂದಾಗಿದ್ದಾರೆ.
ವಯನಾಡು ಭೂಕುಸಿತ ದುರಂತದಿಂದಾಗಿ ಸಮಕಷ್ಟದಲ್ಲಿರುವವರಿಗೆ ರಶ್ಮಿಕಾ ಮಂದಣ್ಣ, ಮೋಹನ್ ಲಾಲ್ ಅವರು ಸಹಾಯ ಮಾಡಿದ್ದಾರೆ. ಇದೀಗ ಅಲ್ಲು ಅರ್ಜುನ್ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ಕುರಿತು ಸ್ವತಃ ನಟ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಈ ಕುರಿತು ಶೇರ್ ಮಾಡಿಕೊಂಡಿರುವ ಪೋಸ್ಟ್ ನಲ್ಲಿ ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಕೇರಳದ ಜನರು ನನಗೆ ಯಾವಾಗಲೂ ತುಂಬಾ ಪ್ರೀತಿಯನ್ನು ನೀಡಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಲು ಬಯಸುತ್ತೇನೆ. ನಿಮ್ಮೆಲ್ಲರ ಸುರಕ್ಷೆ ಮತ್ತು ಶಕ್ತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇನ್ನು ನಟನ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.