ಬೆಂಗಳೂರು, ಆ.13(DaijiworldNews/AA): ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಆಗಸ್ಟ್ 15ರಂದು ಸೀಮಂತ ಶಾಸ್ತ್ರ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಅವಿವಾಗೆ ಏಳು ತಿಂಗಳಾಗಿದೆ. ಈ ಹಿನ್ನೆಲೆ ಸುಮಲತಾ ಅವರು ಸೀಮಂತ ಶಾಸ್ತ್ರ ಹಮ್ಮಿಕೊಂಡಿದ್ದಾರೆ. ಆಗಸ್ಟ್ 15ರಂದು ಅಭಿಷೇಕ್ ಅಂಬರೀಷ್ ಮನೆಯಲ್ಲಿ ಸರಳವಾಗಿ ಈ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಶಾಸ್ತ್ರವು ತುಂಬಾನೇ ಖಾಸಗಿಯಾಗಿ ನಡೆಯಲಿದೆ ಎನ್ನಲಾಗಿದೆ.
ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಆಪ್ತರು ಹಾಗೂ ಕುಟುಂಬದವರು ಕೂಡ ಈ ಶಾಸ್ತ್ರದಲ್ಲಿ ಭಾಗಿ ಆಗಲಿದ್ದಾರೆ. ಇದಕ್ಕಾಗಿ ಈಗಾಗಲೇ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
2023ರ ಜೂನ್ 5ರಂದು ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೇ ಜೂನ್ನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಅವರು ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.