ಒಟ್ಟಾವಾ, ಅ.21(DaijiworldNews/AA): ಖಲಿಸ್ತಾನಿ ಭಯೋತ್ಪಾದಕರು ಕೆನಡಾ ಭದ್ರತಾ ಗುಪ್ತಚರ ಸೇವೆಯ ಆಸ್ತಿ ಎಂದು ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಅವರು ಖಲಿಸ್ತಾನಿ ಉಗ್ರರನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಭಾರತೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಸವಾಲೆಸೆಯಲು ಪ್ರಯತ್ನಿಸುತ್ತಿರುವವರೊಂದಿಗೆ ಸ್ನೇಹಯುತವಾಗಿ ನಡೆದುಕೊಳ್ಳುವ ಮೊದಲು ಕೆನಡಾ ಸರ್ಕಾರ ನಮ್ಮ ಮೂಲ ಕಾಳಜಿಯನ್ನು ಪ್ರಾಮಾಣಿಕವಾಗಿ ಅರ್ಥಮಾಡಿಕೊಳ್ಳಬೇಕು. ಈ ಖಲಿಸ್ತಾನಿ ಉಗ್ರಗಾಮಿಗಳು ಭಾರತೀಯ ಪ್ರಜೆಗಳಲ್ಲ, ಅವರು ಕೆನಡಾದ ಪ್ರಜೆಗಳು ಮತ್ತು ಯಾವುದೇ ದೇಶವು ತನ್ನ ನಾಗರಿಕರಿಗೆ ಮತ್ತೊಂದು ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಅವಕಾಶ ನೀಡಬಾರದು ಎಂದು ತಿಳಿಸಿದರು.
ಖಾಲಿಸ್ತಾನಿ ಭಯೋತ್ಪಾದಕರ ಹತ್ಯೆಗೆ ಸಂಬಂಧಿಸಿದಂತೆ ತನ್ನ ಮೇಲೆ ಹೊರಿಸಲಾದ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ. ಭಾತದ ಹೈಕಮಿಷನರ್ ಆಗಿರುವ ನಾನು ಅಂತಹ ಯಾವುದೇ ಕೆಲಸ ಮಾಡಿಲ್ಲ. ಕೆನಡಾದಲ್ಲಿ ಖಲಿಸ್ತಾನಿ ಪರ ಅಂಶಗಳನ್ನು ಮೇಲ್ವಿಚಾರಣೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ. ನಮ್ಮ ತಂಡವು ಮುಕ್ತ ಮೂಲಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತದೆ. ನಾವು ಪತ್ರಿಕೆಗಳನ್ನು ಓದುತ್ತೇವೆ, ಅವರ ಹೇಳಿಕೆಗಳನ್ನು ನಾವು ಗಮನಿಸುತ್ತೇವೆ ಎಂದರು.