ಟೊರಾಂಟೋ, ನ.08(DaijiworldNews/AA): ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಸಂದರ್ಶನವನ್ನು ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಸುದ್ದಿವಾಹಿನಿಯೊಂದನ್ನು ಕೆನಡಾ ನಿಷೇಧಿಸಿದೆ.
ಸಂದರ್ಶನದಲ್ಲಿ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಕುರಿತು ಜೈಶಂಕರ್ ಪ್ರತಿಕ್ರಿಯಿಸಿದ್ದರು. ಈ ಸಂದರ್ಶನವನ್ನು ಆಸ್ಟ್ರೇಲಿಯಾದ ಸುದ್ದಿವಾಹಿನಿ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಬಿತ್ತರಿಸಿತ್ತು. ಕೆನಡಾದಲ್ಲಿ ಭಾರತ ವಿರೋಧಿ ಶಕ್ತಿಗಳಿಗೆ ರಾಜಕೀಯವಾಗಿ ಅವಕಾಶ ನೀಡಲಾಗುತ್ತಿದೆ ಎಂದು ಜೈಶಂಕರ್ ಈ ಸಂದರ್ಶನದಲ್ಲಿ ತಿಳಿಸಿದ್ದರು.
ಜೈಶಂಕರ್ ಅವರು ಕೆನಡಾವನ್ನು ಟೀಕಿಸಿದ್ದರಿಂದ ಆಸ್ಟ್ರೇಲಿಯಾ ಟುಡೇ ಚಾನೆಲ್ ಅನ್ನು ನಿರ್ಬಂಧಿಸಲಾಗಿದೆ. ಕೆನಡಾದಲ್ಲಿ ಹಿಂದೂ ದೇಗುಲಗಳ ಮೇಲೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ದಾಳಿ ಬಗ್ಗೆ ಪ್ರಧಾನಿ ಮೋದಿ ಖಂಡನೆ ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಅಧಿಕಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನ ಎಂದು ಪ್ರತಿಕ್ರಿಯೆ ನೀಡಿದ್ದರು.
ಕೆನಡಾ ಯಾವುದೇ ಆಧಾರವಿಲ್ಲದೆ ಭಾರತದ ಮೇಲೆ ಮಾಡಿರುವ ಆರೋಪಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಭಾರತದ ರಾಜತಾಂತ್ರಿಕ ಅಧಿಕಾರಿಗಳು, ಕೆನಡಾದ ನಡೆ ಸ್ವೀಕಾರಾರ್ಹವಲ್ಲ. ಮೂರನೆಯದಾಗಿ ಕೆನಡಾದಲ್ಲಿ ಭಾರತ ವಿರೋಧಿ ಅಂಶಗಳಿಗೆ ರಾಜಕೀಯ ಬಣ್ಣ ನೀಡಲಾಗಿದೆ. ಔಟ್ಲೆಟ್ ಅನ್ನು ನಿಷೇಧಿಸುವ ಕೆನಡಾದ ಕ್ರಮವು ಆಶ್ಚರ್ಯಕರವಾಗಿದೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕೆನಡಾದ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದ್ದರು.