ನ್ಯೂಯಾರ್ಕ್, ಡಿ.03(DaijiworldNews/AK): ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್ ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

2025ರ ಜ.20ರ ಒಳಗಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ. ಮಧ್ಯಪ್ರಾಚ್ಯ ಬಹುದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಟ್ರಂಪ್ ಇಸ್ರೇಲ್ಗೆ ಬೆಂಬಲವಾಗಿ ನಿಲ್ಲುವುದಾಗಿ ತಿಳಿಸಿದ್ದಾರೆ. ಬೈಡೆ
2023ರ ಅ.7 ರಂದು ಹಮಾಸ್, ಇಸ್ರೇಲ್ ಮೇಲೆ ಅತ್ಯಂತ ಭೀಕರ ದಾಳಿಯನ್ನು ನಡೆಸಿತು. ಈ ದಾಳಿಯಲ್ಲಿ 1,208 ಮಂದಿ ಮೃತಪಟ್ಟರು. ದಾಳಿಯ ಸಂದರ್ಭದಲ್ಲಿ ಉಗ್ರರು 251 ಒತ್ತೆಯಾಳುಗಳನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಕೆಲವರು ಈಗಾಗಲೇ ಮೃತಪಟ್ಟಿದ್ದಾರೆ. ಆ ಪೈಕಿ 97 ಮಂದಿಯನ್ನು ಇನ್ನೂ ಗಾಜಾದಲ್ಲಿ ಬಂಧಿಸಲಾಗಿದ್ದು, ಇದರಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ ಎಂದು ಸೇನೆ ಹೇಳಿದೆ.