ಮಾಲ್ಡೀವ್ಸ್,ಜೂ08(DaijiWorldNews/AZM):ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹ್ಮದ್ ಸೋಲಿಯವರಿಗೆ ಭಾರತೀಯ ಕ್ರಿಕೆಟ್ ಆಟಗಾರರು ಸಹಿ ಮಾಡಿರುವ ಕ್ರಿಕೆಟ್ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ವಿದೇಶ ಪ್ರವಾಸದಲ್ಲಿರುವ ಮೋದಿ, ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹ್ಮದ್ ಸೋಲಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಮಾಲ್ಡೀವ್ಸ್'ನಲ್ಲಿ ಕ್ರಿಕೆಟ್ ಕ್ರೀಡೆಯನ್ನು ಜನಪ್ರೀಯಗೊಳಿಸಲು ಭಾರತ ನೆರವು ನೀಡಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಉಭಯ ದೇಶಗಳ ನಡುವೆ ಹಲವು ಮಹತ್ವದ ಒಪ್ಪಂದಗಳಾಗಿದ್ದು, ಪ್ರಮುಖವಾಗಿ ಮಾಲ್ಡೀವ್ಸ್'ನಲ್ಲಿ ಕ್ರಿಕೆಟ್ ಜನಪ್ರೀಯತೆಗಾಗಿ ಕ್ರಿಕೆಟ್ ಮೈದಾನಗಳನ್ನು ಸ್ಥಾಪಿಸಲಾಗುವುದು ಎಂದು ಮೋದಿ ಘೋಷಿಸಿದರು.
ಮಾಲ್ಡೀವ್ಸ್ ಕ್ರಿಕೆಟ್ ಆಟಗಾರರಿಗೆ ಬಿಸಿಸಿಐ ತರಬೇತಿ ನೀಡಲಿದ್ದು, ಈ ಮೂಲಕ ಎರಡೂ ದೇಶಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳಲಿ ಎಂದು ಪ್ರಧಾನಿ ಆಶಿಸಿದರು.