ಶ್ರೀನಗರ, ಜೂ 12 (Daijiworld News/SM): ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಇದೀಗ ಮತ್ತೆ ಹಳೆ ವರಸೆಯನ್ನೇ ಮುಂದುವರೆಸಿದೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿನ ಕೆ ಪಿ ರೋಡ್ ನಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿನ ದಾಳಿಗೆ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಇದೇ ವೇಳೆ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿಯೇ ನಡೆದಿದೆ. ಅಲ್ಲದೆ ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
ಸಿಆರ್ಪಿಎಫ್ ಯೋಧರ ಮೇಲಿನ ದಾಳಿಯ ಹೊಣೆಯನ್ನು ಪಾಕಿಸ್ತಾನದ ಅಲ್ ಉಮರ್ ಮುಜಾಹಿದೀನ್ ಉಗ್ರ ಸಂಘಟನೆ ಹೊತ್ತು ಕೊಂಡಿದೆ. ಅನಂತ್ನಾಗ್ ನ ಚೀ ಗಾಲಿ ಸಮೀಪದ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಉಗ್ರರ ಗುಂಡಿನ ದಾಳಿ ನಡೆದಿದೆ. ಎರಡು ವಾಹನಗಳಲ್ಲಿ ಬಂದ ಮುಸುಕುಧಾರಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.