ಫ್ರಾನ್ಸ್,,ಫೆ.12 (DaijiworldNews/AK): ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ಗೆ ಭೇಟಿ ನೀಡಿ ಮಾರ್ಸಿಲ್ಲೆಯಲ್ಲಿರುವ ‘ಮಜಾರ್ಗ್ಯೂಸ್ ಯುದ್ಧ ಸ್ಮಶಾನ’ಕ್ಕೆ ಭೇಟಿ ನೀಡಲಿದ್ದಾರೆ.

ವಿಶ್ವಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಸೈನಿಕರ ಸ್ಮರಣಾರ್ಥವಾಗಿ ನಿರ್ಮಿಸಲಾದ ಸ್ಮಾರಕವಿದೆ. ಇಲ್ಲಿ ಪ್ರಧಾನಿ ಮೋದಿ ಹುತಾತ್ಮರಾದ ಭಾರತದ ವೀರ ಪುತ್ರರಿಗೆ ಗೌರವ ಸಲ್ಲಿಸಲಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕೂಡ ಮೋದಿಗೆ ಸಾಥ್ ನೀಡಲಿದ್ದಾರೆ.
ವಿದೇಶಿ ನೆಲದಲ್ಲಿ ಭಾರತೀಯ ಸೈನಿಕರ ಅತ್ಯುನ್ನತ ತ್ಯಾಗವನ್ನು ಪ್ರಧಾನಿ ಮೋದಿ ಸ್ಮರಿಸುತ್ತಿರುವುದು ಇದೇ ಮೊದಲಲ್ಲ. ಬಹುತೇಕ ಪ್ರತಿಯೊಂದು ವಿದೇಶಿ ಪ್ರವಾಸದಲ್ಲೂ, ಪ್ರಧಾನಿ ಮೋದಿ ವಿದೇಶಿ ಮಣ್ಣನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಭಾರತದ ಸೈನಿಕರ ಸ್ಮಾರಕಗಳಿಗೆ ಭೇಟಿ ನೀಡುವ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ.