ಪಾಕಿಸ್ತಾನ,ಆ.09 (Daijiworld News/RD): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಆರ್ಟಿಕಲ್ 370 ಅನ್ನು ಭಾರತ ರದ್ದುಗೊಳಿಸಿದ್ದು, ಇದಕ್ಕೆ ಪಾಕ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದ ಪಾಕ್ ಈ ಪತ್ರವನ್ನು ನಿರಾಕರಿಸುವ ಮೂಲಕ ವಿಶ್ವ ಮಟ್ಟದಲ್ಲಿ ಮುಖಭಂಗ ಮಾಡಿದೆ.
ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ ಪಾಕಿಸ್ತಾನ, ಆದರೆ ಈ ಪತ್ರಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ, ಜೊತೆಗ ಪಾಕ್ ಬರೆದ ಈ ಪತ್ರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಆಂಟೋನಿಯೋ ಗುಟೆರೆಸ್ ನ್ಯೂಯಾರ್ಕ್ನ ಮಾಧ್ಯಮಗಳಲ್ಲಿ ಈ ಬಗ್ಗೆ ಸ್ಪಷ್ಠಪಡಿಸಿದ್ದಾರೆ.
ಚಿಕ್ಕಪುಟ್ಟ ವಿಷಯಗಳಿಗೂ ಕೂಡ ವಿಶ್ವ ಮಟ್ಟದಲ್ಲಿ ಮುಖಭಂಗ ಎದುರಿಸುವ ಪಾಕ್ ಇದೀಗ ವಿಶ್ವಸಂಸ್ಥೆಯಿಂದ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ನಾಚಿಗೇಡಿಗೆ ಒಳಗಾಗಿದೆ. ಭಾರತವು ಕಾಶ್ಮೀರಕ್ಕೆ ಸಂಬಂಧಪಟ್ಟಂತೆ ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಮೂಲಕ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ, ವಿಶ್ವ ಸಂಸ್ಥೆಗೆ ಪತ್ರ ಬರೆದ ಪಾಕಿಸ್ಥಾನ. ಇದಕ್ಕೆ ಯಾವುದೇ ರೀತಿಯ ಸ್ಪಂದನೆ ನೀಡದೆ ಮನವಿಯನ್ನು ಪರಿಗಣಿಸಲಿಲ್ಲ.