ವಾಷಿಂಗ್ಟನ್, ಆ.23(Daijiworld News/SS): ಜಾಗತಿಕ ಸರ್ವೇಕ್ಷಣಾ ಸಂಸ್ಥೆ (ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್) ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಸಮರ ಸಾರಿದ್ದ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಿದೆ.
ಕ್ಯಾನ್ ಬೆರ್ರಾದಲ್ಲಿ ನಡೆದ ಫತ್ಫ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ. ಉಗ್ರ ಪೋಷಣೆಗೆ ಆರ್ಥಿಕ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು 'ವರ್ಧಿತ ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಈ ಕುರಿತಂತೆ ಜಾಗತಿಕ ಸರ್ವೇಕ್ಷಣಾ ಸಂಸ್ಥೆ (ಫತ್ಫ್-FATF) ಈ ಕ್ರಮ ಕೈಗೊಂಡಿದ್ದು, ಪಾಕಿಸ್ತಾನವನ್ನು ವರ್ಧಿತ ಕಪ್ಪುಪಟ್ಟಿಗೆ ಸೇರಿಸಿದೆ ಎಂದು ಮೂಲಗಳು ತಿಳಿಸಿದೆ.
ಉಗ್ರರಿಗೆ ಹಣಕಾಸು ನೆರವು ನೀಡಿದ ಮತ್ತು ಉಗ್ರರಿಗೆ ಆರ್ಥಿಕ ನೆರವು ನೀಡುವ ಹವಾಲಾ ದಂಧೆಯ ಕುರಿತು ಸೂಕ್ತ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಫತ್ಫ್ ಪಾಕಿಸ್ತಾನವನ್ನು ವರ್ಧಿತ ಕಪ್ಪುಪಟ್ಟಿಗೆ ಸೇರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕೈಗೊಂಡಿದ್ದ ಕ್ರಮಗಳು ಫತ್ಪ್'ನ ಮಾನದಂಡಕ್ಕೆ ಸಮವಾಗಿಲ್ಲ. ಪಾಕಿಸ್ತಾನದ ಮಂಡಿಸಿದ ಎಲ್ಲ ವಾದಗಳ ಹೊರತಾಗಿಯೂ ಫತ್ಫ್ ನಿಗದಿ ಪಡಿಸಿದ್ದ 40 ಮಾನದಂಡಗಳ ಪೈಕಿ 32 ಮಾನದಂಡಗಳಲ್ಲಿ ಪಾಕಿಸ್ತಾನ ವಿಫಲವಾಗಿದೆ ಎಂದು ಫತ್ಫ್ ಸಭೆಯಲ್ಲಿ ಹೇಳಲಾಗಿದೆ.