ಇಸ್ಲಾಮಾಬಾದ್, ಆ.27(Daijiworld News/SS): ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಜಿ -7 ಶೃಂಗಸಭೆಯ ಹೊರತಾಗಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೆನ್ನಲ್ಲೇ, ಇತ್ತ ಪಾಕ್ ಪ್ರಧಾನಿ ಭಾರತಕ್ಕೆ ನೇರವಾಗಿಯೇ ಪರಮಾಣು ಬೆದರಿಕೆ ಹಾಕಿದ್ದು, ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ಮಾತನಾಡಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಿರ್ಧರಿಸುವ ಸಮಯ ಬಂದಿದ್ದು, ನಿರ್ಣಾಯಕ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಿದಾಗ ಭಯೋತ್ಪಾದನೆ ಬಗ್ಗೆ ಆರೋಪ ಮಾಡಿತು. ಭಯೋತ್ಪಾದನೆ ಹರಡಿದೆ ಎಂದು ನಮ್ಮ ಮೇಲೆ ಆರೋಪ ಹೊರಿಸಲು ಭಾರತವು ಅವಕಾಶವನ್ನು ಹುಡುಕುತ್ತಲೇ ಇದೆ. ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಾರತ ದೊಡ್ಡ ತಪ್ಪು ಮಾಡಿದೆ. ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಎಚ್ಚರಿಸಿದ್ದಾರೆ.