ಲಾಹೋರ್, ಸೆ.03(Daijiworld News/SS): ಯಾವುದೇ ಸಮಸ್ಯೆಗೂ ಯುದ್ದವೇ ಪರಿಹಾರವಲ್ಲ ಎಂಬುದನ್ನು ಭಾರತಕ್ಕೆ ಹೇಳಲು ಬಯಸುತ್ತೇನೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಕಾಶ್ಮೀರ ವಿಚಾರವಾಗಿ ಪರಮಾಣು ಶಕ್ತ ರಾಷ್ಟ್ರಗಳ ನಡುವೆ ಪರಿಸ್ಥಿತಿ ಬಿಗಡಾಯಿಸಿರುವಂತೆ ಪಾಕಿಸ್ತಾನ ಎಂದಿಗೂ ಭಾರತದೊಂದಿಗೆ ಯುದ್ಧ ಆರಂಭಿಸುವುದಿಲ್ಲ. ಯಾವುದೇ ತೊಂದರೆಗೂ ಯುದ್ದವೇ ಪರಿಹಾರವಲ್ಲ. ಭಾರತ ಹಾಗೂ ಪಾಕಿಸ್ತಾನ ಪರಮಾಣು ಶಕ್ತಿ ಹೊಂದಿರುವ ರಾಷ್ಟ್ರಗಳಾಗಿದ್ದು, ನಾವು ಎಂದಿಗೂ ಯುದ್ಧ ಪ್ರಾರಂಭಿಸುವುದಿಲ್ಲ. ಒಂದು ವೇಳೆ ಪರಿಸ್ಥಿತಿ ಕೈ ಮೀರಿದರೆ ವಿಶ್ವವೇ ಅಪಾಯವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಯಾವುದೇ ಸಮಸ್ಯೆಗೂ ಯುದ್ದವೇ ಪರಿಹಾರವಲ್ಲ ಎಂಬುದನ್ನು ನಾನು ಭಾರತಕ್ಕೆ ಹೇಳುತ್ತೇನೆ. ಯುದ್ದದಿಂದ ಗೆದ್ದವರು, ಸೋತವರು ಇಬ್ಬರು ಕಳೆದುಕೊಳ್ಳುತ್ತಾರೆ. ಯುದ್ದದಿಂದ ಇನ್ನಿತರ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ ಎಂದು ತಿಳಿಸಿದರು.
ಸದ್ಯ ಭಾರತ ಹಾಗೂ ಪಾಕಿಸ್ತಾನದ ನಡುವಣ ಪರಿಸ್ಥಿತಿಯನ್ನು ಬದಲಾವಣೆ ಮಾಡಬೇಕಾಗಿದೆ. ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿದ್ದೆ. ಆದರೆ ಮಾತುಕತೆಗೆ ಭಾರತದಿಂದ ಯಾವುದೇ ಪ್ರಯತ್ನ ನಡೆಯಲಿಲ್ಲ ಎಂದು ಹೇಳಿದರು.