ಮಾಸ್ಕೋ, ಸೆ.04(Daijiworld News/SS): ಪ್ರಧಾನಿ ನರೇಂದ್ರ ಮೋದಿಯವರ ರಷ್ಯಾ ಪ್ರವಾಸ ಆರಂಭಗೊಂಡಿದ್ದು, ರಾಜಧಾನಿ ಮಾಸ್ತೋ ವಿಮಾನ ನಿಲ್ದಾಣದಲ್ಲಿ ಮೋದಿಗೆ ರಷ್ಯಾ ಸೇನೆ ಗಾರ್ಡ್ ಆಫ್ ಹಾನರ್ ಮೂಲಕ ಅದ್ಧೂರಿ ಸ್ವಾಗತ ದೊರಕಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದೊಂದಿಗೆ ಇದು ಮೂರನೇ ದ್ವಿಪಕ್ಷೀಯ ಭೇಟಿಯಾಗಿದೆ. 3 ದಿನಗಳ ಕಾಲ ರಷ್ಯಾದಲ್ಲಿಯೇ ಉಳಿಯುವ ಪ್ರಧಾನಿ ನರೇಂದ್ರ ಮೋದಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್'ರನ್ನು ಭೇಟಿಯಾಗಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ರಕ್ಷಣೆ, ವ್ಯಾಪಾರ ಸಂಬಂಧ, ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ 5ನೇ ಪೂರ್ವ ಆರ್ಥಿಕ ವೇದಿಕೆ ಮತ್ತು ಸಭೆಯಲ್ಲಿ ಪಾಲ್ಗೊಂಡು ಇತರೆ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಮುಖವಾಗಿ ಭಾರತದಲ್ಲಿ ಹೂಡಿಕೆ ಮಾಡುವ ಕುರಿತು ಪ್ರಧಾನಿ ಮೋದಿ ಮತ್ತು ಪುಟಿನ್ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕೋದ ವ್ಲಾಡಿವೋಸ್ಟಾಕ್ ಅಂತಾರಾಷ್ಟ್ರೀಯ ವಿಮಾನದಿಂದ ಕೆಳಗೆಳಿಯುತ್ತಿದ್ದಂತೆಯೇ ರಷ್ಯಾ ಸೇನೆಯ ಸಿಬ್ಬಂದಿಗಳು ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಕೆ ಮಾಡಿದ್ದಾರೆ. ನಿಲ್ದಾಣದಲ್ಲಿ ರಷ್ಯಾ ಸೇನೆಯ ಉನ್ನತಾಧಿಕಾರಿಗಳು, ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿದ್ದರು.