ಇಸ್ಲಾಮಾಬಾದ್, ಸೆ 24 (DaijiworldNews/SM): ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರದಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಸುಮಾರು 5.8ರಷ್ಟು ಭೂಕಂಪನವಾಗಿದೆ ಎಂದು ತಿಳಿದುಬಂದಿದೆ. ಭೂಕಂಪದ ತೀವ್ರತೆಗೆ ಸುಮಾರು 19 ಜನ ಪ್ರಾಣ ಕಳೆದುಕೊಂಡಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ಮಾತ್ರವಲ್ಲದೆ, ಭಾರತದ ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, 5.8-ತೀವ್ರತೆಯ ಕಂಪನವು 10 ಕಿ.ಮೀ ಆಳದಲ್ಲಿ ಅಪ್ಪಳಿಸಿದೆ. ಪಿಒಕೆಯ ಮಿರ್ಪುರದ ಆಗ್ನೇಯಕ್ಕೆ ಒಂದು ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಎನ್ನಲಾಗಿದೆ.
ಇನ್ನು ಘಟನೆಯಲ್ಲಿ ಸುಮಾರು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ರಕ್ಷಣಾಕಾರ್ಯ ನಡೆಸಲಾಗಿದೆ.