ನ್ಯೂಯಾರ್ಕ್, ಸೆ.27(Daijiworld News/SS): ಕಾಶ್ಮೀರ ಜನತೆಯ ಮಾನವ ಹಕ್ಕುಗಳನ್ನು ಭಾರತ ಸರ್ಕಾರ ರಕ್ಷಿಸಬೇಕು. ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮರುಸ್ಥಾಪನೆ ಮಾಡದ ಹೊರತು ಭಾರತದ ಜೊತೆ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನ ಹೇಳಿದೆ.
ಸಾರ್ಕ್ ಸಭೆಯಲ್ಲಿ ಸಚಿವ ಜೈಶಂಕರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಪಾಕ್ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿ ತನ್ನ ಆಡಳಿತ ತೆಕ್ಕೆಗೆ ತೆಗೆದುಕೊಂಡಿರುವ ಭಾರತ ಸರ್ಕಾರ ಮತ್ತೆ ಕಾಶ್ಮೀರಕ್ಕೆ ಮೊದಲಿನ ಸ್ವಾಯತ್ತತೆ ನೀಡದಿದ್ದರೆ ಪಾಕಿಸ್ತಾನ ಮಾತುಕತೆಗೆ ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರ ಜನತೆಯ ಮಾನವ ಹಕ್ಕುಗಳನ್ನು ಭಾರತ ಸರ್ಕಾರ ರಕ್ಷಿಸಬೇಕು, ಅವರ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ತೊಂದರೆ ಮಾಡುವುದಿಲ್ಲ, ರಕ್ಷಣೆ ನೀಡುತ್ತೇವೆ ಎಂಬುದನ್ನು ಸರ್ಕಾರ ಖಚಿತಪಡಿಸಬೇಕು. ಹಾಗಾದರೆ ಮಾತ್ರ ಪಾಕಿಸ್ತಾನ ಮಾತುಕತೆಗೆ ಮುಂದುವರಿಯುವುದು ಎಂದು ಪಾಕ್ ತಿಳಿಸಿದೆ.