ವಾಷಿಂಗ್ಟನ್, ಅ.01(Daijiworld News/SS): ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವೀಪಕ್ಷೀಯ ಸಮಸ್ಯೆಯಾಗಿದ್ದು, ದ್ವಿಪಕ್ಷೀಯ ಮಾತುಕತೆ ಮೂಲಕವೇ ಇತ್ಯರ್ಥವಾಗಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಭಾರತದ ನಿಲುವು ಸ್ಪಷ್ಟವಾಗಿದ್ದು, ಮೂರನೇ ವ್ಯಕ್ತಿ ಅಥವಾ ರಾಷ್ಟ್ರದ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ. ಕಾಶ್ಮೀರ ವಿಚಾರವಾಗಿ ಭಾರತ ತನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದೆ. ಕಾಶ್ಮೀರ ವಿಚಾರವಾಗಿ ಮೂರನೇ ವ್ಯಕ್ತಿ ಅಥವಾ ರಾಷ್ಟ್ರದ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ. ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವೀಪಕ್ಷೀಯ ಸಮಸ್ಯೆಯಾಗಿದ್ದು, ದ್ವಿಪಕ್ಷೀಯ ಮಾತುಕತೆ ಮೂಲಕವೇ ಇತ್ಯರ್ಥವಾಗಬೇಕು. ಇದರಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಿಲ್ಲ ಎಂದು ಹೇಳಿದರು.
ಕಾಶ್ಮೀರ ಸಮಸ್ಯೆ ಇಂದು ನಿನ್ನೆಯದಲ್ಲ. ಕಳೆದ 40 ವರ್ಷಗಳಿಂದಲೂ ಭಾರತ ತನ್ನ ನಿಲುವು ಸ್ಪಷ್ಟ ಪಡಿಸುತ್ತಾ ಬಂದಿದೆ. ಯಾವುದೇ ಕಾರಣಕ್ಕೂ ಕಾಶ್ಮೀರ ವಿಚಾರವಾಗಿ ಭಾರತ ಮಧ್ಯಸ್ಥಿಕೆ ಒಪ್ಪಿಕೊಳ್ಳುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರನ್ನು ಜೈ ಶಂಕರ್ ಭೇಟಿ ಮಾಡಿ ಈ ವಿಚಾರವನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.