ಪ್ಯಾರಿಸ್, ಅ.10(Daijiworld News/SS): ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಫೇಲ್'ನಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಖರೀಸಲಾಗಿದೆ. ಆದರೆ, ಯಾವುದೇ ಅನ್ಯ ದೇಶಗಳ ಮೇಲೆ ದಾಳಿ ಮಾಡುವ ಉದ್ದೇಶ ನಮಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ರಫೇಲ್ ಯುದ್ಧ ವಿಮಾನ ಹಸ್ತಾಂತರಿಸುವ ಮೂಲಕ ಭಾರತ ಮತ್ತು ಫ್ರಾನ್ಸ್ ನಡುವಣ ಸಂಬಂಧ ಮತ್ತಷ್ಟು ಬಲಪಡಿಸಿದಂತಾಗಿದೆ. ಭಾರತ ತನ್ನ ಭದ್ರತೆಗಾಗಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದೆಯೇ ಹೊರತು, ಯಾವುದೇ ಅನ್ಯ ದೇಶಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಅಲ್ಲ ಎಂದು ಹೇಳಿದರು.
ರಫೇಲ್ ಯುದ್ಧ ವಿಮಾನ ಸೇರ್ಪಡೆ ಭಾರತೀಯ ವಾಯುಪಡೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿದಂತಾಗಿದೆ. ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಫೇಲ್'ನಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಖರೀಸಲಾಗಿದೆ. ಆದರೆ, ಯಾವುದೇ ಅನ್ಯ ದೇಶಗಳ ಮೇಲೆ ದಾಳಿ ಮಾಡುವ ಉದ್ದೇಶ ನಮಗಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಭಾರತೀಯ ವಾಯುಪಡೆಗೆ ರಫೇಲ್ ಜೆಟ್'ಗಳ ಸೇರ್ಪಡೆಗೊಳಿಸಿದ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ದೇಶದ ಭದ್ರತೆಗಾಗಿ ಮೋದಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.