ವಾಷಿಂಗ್ಟನ್, ಡಿ 03 (Daijiworld News/MSP): ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದೊಂದು ಹಿಟ್ ಅಂಡ್ ರನ್ ಪ್ರಕರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಜೂಡಿ ಸ್ಟಾನ್ಲಿ (23 ವರ್ಷ) ಮತ್ತು ವಿಜಯವಾಡ ಮೂಲದ ವೈಭವ್ ಗೋಪಿಶೆಟ್ಟಿ (26 ವರ್ಷ) ಎಂದು ಗುರುತಿಸಲಾಗಿದೆ. ಇಬ್ಬರೂ ವಿದ್ಯಾರ್ಥಿಗಳು ಟೆನ್ನಿಸಿ ವಿವಿಯಲ್ಲಿ ಕೃಷಿ ವಿಭಾಗದಲ್ಲಿ ಆಹಾರ ವಿಜ್ಞಾನ ಪದವಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ನ.28ರಂದು ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಟ್ರಕ್ ವೊಂದು ಇವರಿಬ್ಬರ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿಗಳಿಬ್ಬರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಟ್ರಕ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದು, ಈತನನ್ನು 26 ವರ್ಷದ ಡೇವಿಡ್ ಟಾರ್ಸ್ ಎಂದು ಗುರುತಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸೌಥ್ ನ್ಯಾಷ್ ವಿಲ್ಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಸಂತ್ರಸ್ಥರ ಪೊಷಕರಿಗೆ ಮೃತದೇಹಗಳನ್ನು ಭಾರತಕ್ಕೆ ರವಾನಿಸು ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.