ಇಸ್ಲಾಮಾಬಾದ್, ಮಾ 26 (DaijiworldNews/DB): ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಪಾಕಿಸ್ತಾನದಲ್ಲಿ ಉಚಿತ ಗೋಧಿ ಹಿಟ್ಟು ಪಡೆದುಕೊಳ್ಳಲೆಂದು ಜನ ಏಕಾಏಕಿ ಮುಗಿಬಿದ್ದ ಪರಿಣಾಮ ಕಾಲ್ತುಳಿತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಮುಲ್ತಾನ್, ಮುಜಾಫರ್ನಗರ್, ಫೈಸಲಾಬಾದ್ ನಗರಗಳಲ್ಲಿ ಬಡವರಿಗಾಗಿ ಸರ್ಕಾರ ಗೋಧಿ ಹಿಟ್ಟನ್ನು ಉಚಿತವಾಗಿ ವಿತರಿಸುತ್ತಿದ್ದು, ಇದನ್ನು ಪಡೆದುಕೊಳ್ಳಲು ಜನ ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಕಾಲ್ತುಳಿತಕ್ಕೆ ಸಿಕ್ಕಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ವೃದ್ದರು ಎಂದು ತಿಳಿದು ಬಂದಿದೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಆಹಾರ ಪದಾರ್ಥಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಇದರಿಂದ ಜನ ಊಟಕ್ಕೂ ಹಾಹಾಕಾರ ಪಡುವ ಪರಿಸ್ಥಿತಿ ತಲೆದೋರಿದೆ.