ಕಠ್ಮಂಡು, ಏ 02 (DaijiworldNews/MS): ನೇಪಾಳದ ನೂತನ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಢೀರನೇ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣದಿಂದ ಅವರನ್ನು ಕಠ್ಮಂಡುವಿನ ಮಹಾರಾಜ್ಗಂಜ್ನಲ್ಲಿರುವ ತ್ರಿಭುವನ್ ವಿಶ್ವವಿದ್ಯಾನಿಲಯ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧಿಕೃತ ಪ್ರಕಟಣೆ ಹೇಳಿದೆ.
ಎರಡು ವಾರಗಳ ಹಿಂದೆಯಷ್ಟೇ ನೇಪಾಳದ ಹಿರಿಯ ಕಾಂಗ್ರೆಸ್ ನಾಯಕ ರಾಮಚಂದ್ರ ಪೌಡೆಲ್ ನೇಪಾಳದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪೌಡೆಲ್ ಅವರು ಸಿಪಿಎನ್–ಯುಎಂಎಲ್ ಸುಭಾಶ್ ಚಂದ್ರ ನೆಂಬಾಂಗ್ ಅವರನ್ನು ಸೋಲಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.