ಸೆರ್ಬಿಯಾ,(Daijiworld News/KH):ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಂಟ್ರಲ್ ಬೆಲ್ಗ್ರೇಡ್ನ ಶಾಲೆಯೊಂದರಲ್ಲಿ ಹದಿಹರೆಯದ ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಎಂಟು ಮಕ್ಕಳು ಮತ್ತು ಶಾಲಾ ಸಿಬ್ಬಂದಿಯನ್ನು ಕೊಂದಿದ್ದಾರೆ. ಸರ್ಬಿಯಾದ ಪೊಲೀಸರ ಪ್ರಕಾರ ಇನ್ನೂ ಆರು ಮಕ್ಕಳು ಮತ್ತು ಶಿಕ್ಷಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಏಳನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ತನ್ನ ತಂದೆಯ ಬಂದೂಕಿನಿಂದ ಇತರ ವಿದ್ಯಾರ್ಥಿಗಳನ್ನು ಮತ್ತು ಶಾಲಾ ಸಿಬ್ಬಂದಿ ಮೇಲೆ ಗುಂಡುಗಳನ್ನು ಹಾರಿಸಿದ್ದಾನೆ ಅಲ್ಲದೆ ಗುಂಡಿನ ದಾಳಿಯಲ್ಲಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಸರ್ಬಿಯಾದ ಮಾಧ್ಯಮಗಳು ವರದಿ ಮಾಡಿವೆ.