ಫ್ರಾನ್ಸ್, ಜು 15 (DaijiworldNews/AK): ಪ್ರಧಾನಿ ಮೋದಿ ಜತೆಗೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರು ಫ್ರೆಂಚ್, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ಬಾಂಧವ್ಯದ ಬಗ್ಗೆ ಟ್ವಿಟರ್ನಲ್ಲಿ ಬರೆದು ಫೋಟೋ ವನ್ನು ಹಂಚಿಕೊಂಡಿದ್ದಾರೆ.
ಮ್ಯಾಕ್ರನ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿದ ಮೋದಿ ಫಾರೆವರ್ ಫ್ರೆಂಡ್ಸ್ ’ಎಂದು ಹೇಳಿದ್ದಾರೆ. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ ಅವರು ಗ್ರೀನ್ ಹೈಡ್ರೋಜನ್, ನವೀಕರಿಸಬಹುದಾದ ಇಂಧನ, ಎಎಲ್ ಮತ್ತು ಅರೆವಾಹಕಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಜತೆಯಾಗಿ ಕೆಲಸ ಮಾಡುವ ಉತ್ಸುಕತೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಪ್ರಧಾನಿ ಮೋದಿ ಅವರು ಫ್ರಾನ್ಸ್ ಭೇಟಿಯ ಬಗ್ಗೆ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು “ನನ್ನ ಸ್ನೇಹಿತ, ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗಿನ ಮಾತುಕತೆಗಳು ಬಹಳ ಪ್ರಯೋಜನಕಾರಿಯಾಗಿದೆ. ನಾವು ಭಾರತ-ಫ್ರಾನ್ಸ್ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.