ಬೀಜಿಂಗ್, ಜು 24 (DaijiworldNews/AK):ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಲ್ಲಿ ನಡೆದಿದೆ.
ಹೀಲಾಂಗ್ಜಿಯಾಂಗ್ ಪ್ರಾಂತ್ಯದ ಕಿಕಿಹಾರ್ನಲ್ಲಿರುವ ಜಿಮ್ ನಲ್ಲಿ ಘಟನೆ ಸಂಭವಿಸಿದ್ದು ಮೇಲ್ಚಾವಣಿ ಕುಸಿದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೋಮವಾರ ಮುಂಜಾನೆ ಘಟನೆ ನಡೆದಿದು, 14 ಮಂದಿಯನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್ಗ ಶೋಧ ಕಾರ್ಯಾಚರಣೆಗೆ ದೌಡಯಿಸಿವೆ.
ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಭಾರೀ ಮಳೆ ಬಿದ್ದಾಗ ಛಾವಣಿ ಕುಸಿದಿದೆ. ಹೀಗಾಗಿ ಕಟ್ಟಡ ನಿರ್ಮಾಣ ಮಾಡಿದ ಉಸ್ತುವಾರಿಯನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.