ಪೇಶಾವರ, ಜು 31 (DaijiworldNews/HR): ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ ಸಮೀಪವಿರುವ ಖಾರ್ ಪಟ್ಟಣದಲ್ಲಿ ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 39 ಮಂದಿ ಸಾವನ್ನಪ್ಪಿ 200ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ ರಾಜಕೀಯ ಪಕ್ಷದ ಕಾರ್ಯಕ್ರಮ ನಡೆಯುತ್ತಿದ್ದು, ಟೆಂಟ್ ಒಳಗಡೆ ನಡೆಯುತ್ತಿದ್ದ ಈ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ದಾಳಿಯಲ್ಲಿ ಸ್ಥಳೀಯ ಜೆಯುಎಲ್-ಎಫ್ ನಾಯಕ ಮೃತಪಟ್ಟಿದ್ದಾರೆ.
ಈ ಕುರಿತು ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆರೋಗ್ಯ ಸಚಿವ ರಿಯಾಜ್ ಅನ್ವರ್ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ 39 ಮೃತ ದೇಹಗಳಿದ್ದು, 123 ಮಂದಿ ಗಾಯಗೊಂಡಿದ್ದು ಈ ಪೈಕಿ 17 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.