ಇಸ್ಲಾಮಾಬಾದ್, ಆ 29 (DaijiworldNews/HR): ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ತೋಷಖಾನಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಮತ್ತು ಮೂರು ವರ್ಷಗಳ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ರದ್ದುಗೊಳಿಸಿ, ಜಾಮೀನು ನೀಡಿದೆ ಎಂದು ವರದಿಯಾಗಿದೆ.
ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ಸಿ) ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಸೋಮವಾರ ತೀರ್ಪನ್ನು ಕಾಯ್ದಿರಿಸಿದ್ದು, ಇಂದು ವಿಚಾರಣೆ ನಡೆಸಿ ಅಪರಾಧ ಮತ್ತು 3 ವರ್ಷ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದೆ.
ಇನ್ನು ಇಸ್ಲಾಮಾಬಾದ್ನ ವಿಚಾರಣಾ ನ್ಯಾಯಾಲಯವು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಹಾಗೂ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಆಗಸ್ಟ್ 5 ರಂದು ದೋಷಿ ಮತ್ತು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.