ಇಸ್ಲಾಮಾಬಾದ್,ಫೆ 05 (DaijiworldNews/PC): ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್ ನಗರದಲ್ಲಿರುವ ಚೋಡ್ವಾನ್ ಪೊಲೀಸ್ ಠಾಣೆಯಲ್ಲಿ ಫೆ.5 ರಂದು ಮುಂಜಾನೆ ಉಗ್ರರಿಂದ ಭೀಕರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 10 ಮಂದಿ ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದು. 6 ಮಂದಿ ಗಂಭೀರ ಗಾಯಗೊಂಡಿದ್ದಾರೆ ಮೂಲಗಳಿಂದ ತಿಳಿದುಬಂದಿದೆ.
ಮುಂಜಾನೆ 3 ಗಂಟೆಗೆ ಉಗ್ರರು ಪೊಲೀಸ್ ಠಾಣೆ ಮೇಲೆ ಸ್ನೈಪರ್ಗಳಿಂದ ಗುಂಡಿನ ದಾಳಿ ನಡೆಸಿ ಠಾಣೆಯೊಳಗೆ ನುಗ್ಗಿದ್ದಾರೆ. ಪೊಲೀಸ್ ಠಾಣೆ ನುಗ್ಗಿದ ಬಳಿಕ ಹ್ಯಾಂಡ್ ಗ್ರೆನೇಡ್ಗಳನ್ನು ಬಳಸಿ ದಾಳಿ ನಡೆಸಿದ್ದಾರೆ.
ಪಾಕಿಸ್ತಾನದಲ್ಲಿ ಫೆ 8 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಉಗ್ರರ ದಾಳಿ ನಡೆದಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಹಾಗೂ ಪೊಲೀಸ್ ಠಾಣೆಯಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ.