ನ್ಯೂಯಾರ್ಕ್, ಏ 06 (DaijiworldNews/MS): ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತೀಯ ದೂತಾವಾಸ ಶುಕ್ರವಾರ ತಿಳಿಸಿದೆ.
ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದೆ. ಈ ಮೂಲಕ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವಿನ ಸರಣಿ ಮುಂದುವರೆದಿದ್ದು, ಉಮಾ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಉಮಾ ಓಹಿಯೋದ ಕ್ಲೀವ್ಲ್ಯಾಂಡ್ನಲ್ಲಿ ವ್ಯಾಸಾಂಗ ಮಾಡುತ್ತಿದ್ದು ಭಾರತೀಯ ದೂತವಾಸ ಕಚೇರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೃತಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ.
2024 ರ ಆರಂಭದಿಂದ, US ನಲ್ಲಿ ಭಾರತೀಯ ಅಥವಾ ಭಾರತೀಯ ಮೂಲದ ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ 10 ಸಾವುಗಳು ಸಂಭವಿಸಿವೆ.