ನಾಮ್ ಪೆನ್, ಏ.27(DaijiworldNews/AA): ಕಾಂಬೋಡಿಯಾ ದೇಶದ ಪಶ್ಚಿಮ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಮದ್ದುಗುಂಡುಗಳು ಸ್ಫೋಟಗೊಂಡು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಕಾಂಬೋಡಿಯಾ ಪ್ರಧಾನಿ ಹನ್ ಮಾನೆಟ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಶನಿವಾರ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಸೈನಿಕರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಸ್ಫೋಟದ ಸುದ್ದಿಯನ್ನು ಕೇಳಿ ಆಘಾತವಾಯಿತು. ಘಟನೆಯಲ್ಲಿ 20 ಸೈನಿಕರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ ಎಂದರು.
ಅಲ್ಲದೇ ಈ ದುರಂತದಲ್ಲಿ ಸಾವನ್ನಪ್ಪಿದ ಸೈನಿಕರ ಅಂತ್ಯಕ್ರಿಯೆಯ ವೆಚ್ಚದ ಸಂಪೂರ್ಣ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಲಿದೆ. ಮೃತ ಸೈನಿಕರ ಕುಟುಂಬಕ್ಕೆ ತಲಾ 20 ಮಿಲಿಯನ್ ಯುಎಸ್ ಡಾಲರ್ ಮತ್ತು ಘಟನೆಯಲ್ಲಿ ಗಾಯಗೊಂಡ ಸೈನಿಕರಿಗೆ ತಲಾ 20 ಮಿಲಿಯನ್ ರಿಯೆಲ್ ಆರ್ಥಿಕ ನೆರವು ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.