ಲಂಡನ್, ಜು.06(DaijiworldNews/AA): ಎರಡೂ ದೇಶಗಳಿಗೆ ಉಪಯುಕ್ತವಾಗುವ ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ತಾನು ಸಿದ್ಧ ಎಂದು ಬ್ರಿಟನ್ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಹೇಳಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮಾತುಕತೆ ನಡೆಸಿದ್ದಾರೆ. ಈ ನಾಯಕರು ತಮ್ಮ ಚುನಾವಣಾ ಗೆಲುವಿಗಾಗಿ ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡಿದ್ದು ಯುಕೆ ಮತ್ತು ಭಾರತದ ನಡುವಿನ ಸಂಬಂಧದ ಬಲವನ್ನು ಪ್ರತಿಬಿಂಬಿಸಿದ್ದಾರೆ ಎಂದು ವರದಿಯಾಗಿದೆ.
ಉಭಯ ದೇಶಗಳ ಪ್ರಧಾನಿಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಚರ್ಚಿಸುತ್ತಾ, ಪ್ರಧಾನ ಮಂತ್ರಿ ಅವರು ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ಸಿದ್ಧರಾಗಿದ್ದಾರೆ. ನಾಯಕರು ಸಾಧ್ಯವಾದಷ್ಟು ಬೇಗ ಭೇಟಿಯಾಗಲು ಆಶಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ.
ಪಿಎಂ ನರೇಂದ್ರ ಮೋದಿ ಮತ್ತು ಯುಕೆ ಪಿಎಂ ಕೀರ್ ಸ್ಟಾರ್ಮರ್ ಅವರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಬಾಂಧವ್ಯವನ್ನು ನೆನಪಿಸಿಕೊಂಡಿದ್ದು ಉಭಯ ರಾಷ್ಟ್ರಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ಜೊತೆಗೆ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ, ಮಾತನಾಡಿದರು. ಬ್ರಿಟನ್ ನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಶ್ಲಾಘಿಸಿದ ಅವರು, ಜನರು-ಜನರ ನಡುವಿನ ನಿಕಟ ಸಂಬಂಧಗಳನ್ನು ಉತ್ತೇಜಿಸಲು ಅವರು ಒಪ್ಪಿಕೊಂಡರು ಎಂದು ಪಿಎಂಒ ಕಚೇರಿಯ ಹೇಳಿಕೆ ತಿಳಿಸಿದೆ.