ನ್ಯೂಯಾರ್ಕ್, ಜು. 14(DaijiworldNews/AA): ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಟ್ರಂಪ್ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿದೆ. ಗುಂಡಿನ ಸದ್ದಿಗೆ ಟ್ರಂಪ್ ವೇದಿಕೆಯ ಮೇಲೆ ಬಿದ್ದಿದ್ದಾರೆ. ಅವರ ಭದ್ರತೆಗಾಗಿ ನಿಯೋಜಿಸಲಾಗಿದ್ದ ಸೀಕ್ರೆಟ್ ಸರ್ವೀಸ್ ಏಜೆಂಟ್ಗಳು ಟ್ರಂಪ್ ಅವರನ್ನು ರಕ್ಷಿಸಿ ವೇದಿಕೆಯಿಂದ ತಕ್ಷಣವೇ ವೇದಿಕೆಯಿಂದ ಸ್ಥಳದಿಂದ ಹೊರಗಡೆ ಕರೆದೊಯ್ದಿದ್ದಾರೆ. ಈ ವೇಳೆ ಟ್ರಂಪ್ ಮುಖ ಹಾಗೂ ಕಿವಿಯಲ್ಲಿ ರಕ್ತ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಟ್ರಂಪ್ ರ್ಯಾಲಿಯಲ್ಲಿ ಗುಂಡು ಹಾರಿಸಿದ ಶೂಟರ್ನನ್ನು ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರೊಂದಿಗೆ ಶೂಟರ್ ಜೊತೆಗೆ ಮತ್ತೊಬ್ಬ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಚುನಾವಣಾ ರ್ಯಾಲಿಯಲ್ಲಿನ ಅಪಘಾತದ ಬಳಿಕ ಟ್ರಂಪ್ ಸುರಕ್ಷಿತವಾಗಿದ್ದಾರೆ. ಅವರ ಸುರಕ್ಷತೆಗಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಇನ್ನು ಘಟನೆಯ ಸಂಪೂರ್ಣ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದೆ.