ಮೂಡುಬಿದಿರೆ,ಮೇ 24(Daijiworld News/MSP): ಮೌಲ್ಯಮಾಪಕರ ಎಡವಟ್ಟಿನಿಂದ ಕಡಿಮೆ ಅಂಕ ಪಡೆದಿದ್ದ ಮತ್ತೊಬ್ಬ ಕರಾವಳಿಯ ಬಾಲಕ ಮರುಮೌಲ್ಯ ಮಾಪನದಲ್ಲಿ ಗರಿಷ್ಠ ಅಂಕ ಪಡೆಯುವ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಮರುಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನಿಯಾಗಿ ಮೂಡುಬಿದಿರೆಯ ಅಳ್ವಾಸ್ ಅಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಜ್ಞಾನ್ ಆರ್ ಶೆಟ್ಟಿ ಹೊರಹೊಮ್ಮಿದ್ದಾರೆ.
ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ಎಲ್ಲಾ ವಿಷಯಗಳಲ್ಲೂ ಶೇಕಡಾ ನೂರರಷ್ಟು ಅಂಕಗಳನ್ನು ಪಡೆದುಕೊಂಡಿದ್ದಾರೆ. ಮೂಡುಬಿದಿರೆಯ ಅರತಿ ಹಾಗೂ ರಮೇಶ್ ಶೆಟ್ಟಿ ದಂಪತಿಯ ಪುತ್ರನಾಗಿರುವ ಸುಜ್ಞಾನ್ ಆರ್ ಶೆಟ್ಟಿ ಅವರನ್ನು ಶಾಲೆಯ ಮುಖ್ಯಸ್ಥರಾದ ಮೋಹನ್ ಆಳ್ವ ಅಭಿನಂದಿಸಿದ್ದಾರೆ.