ಉಡುಪಿ, ಆ.18(DaijiworldNews/AA): ಕಾರ್ಕಳ ಪರಶುರಾಮ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕುರಿತು ನಿಂದನಾತ್ಮಕ ಹೇಳಿಕೆ ನೀಡಿದ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನಿಟ್ಟೆ ನವೀನ್ ನಾಯಕ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ದೂರು ದಾಖಲಾಗಿಸಿದ್ದಾರೆ.
ಆಗಸ್ಟ್ 5 ರಂದು ಪರಶುರಾಮ ಥೀಮ್ ಪಾರ್ಕ್ನ ವಿಷಯಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ವಿರುದ್ಧ, ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರು ಏಕವಚನದಲ್ಲಿ ಬೈದು ಅವಮಾನ ಮಾಡಿದ್ದಲ್ಲದೆ, ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 224 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿದೆ.