ಉಡುಪಿ, ಆ.21(DaijiworldNews/AA): ಹೆಜಮಾಡಿ ಮತ್ತು ಸಾಸ್ತಾನದ ಟೋಲ್ಗೇಟ್ಗಳಲ್ಲಿ ಸಂಚರಿಸುವ ಬಸ್ಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವುದನ್ನು ವಿರೋಧಿಸಿ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್ ಮಾಲಕರ ಸಂಘವು ಹಿಂಪಡೆದುಕೊಂಡಿದೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿ ಸಿರುವುದಾಗಿ ಮಾಹಿತಿ ನೀಡಿದೆ. ಈ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಗಿದೆ. ಒಂದು ವೇಳೆ ಮತ್ತೆ ಹೆಚ್ಚುವರಿ ಶುಲ್ಕ ವಿಧಿಸಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಪ್ರತಿಭಟನೆಗೆ ಅವಕಾಶ ಕೋರಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಹೆದ್ದಾರಿ ಇಲಾಖೆಗೂ ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ.