ಉಡುಪಿ, ಆ.31(DaijiworldNews/AK):ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಿದೆ.
ಈ ಹಿನ್ನಲೆ ಭಾದ್ರಗಡ ದ್ವೀಪ, ಮಿಡಲ್ ದ್ವೀಪ(ಕೋಟೆ), ಮಾಡ್ತೀಗುಡ್ಡ ದ್ವೀಪ ಹಾಗೂ ಮಟ್ಟುಪಾರ್ ದ್ವೀಪ ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.